ಬಂಟ್ವಾಳದಲ್ಲಿ ಪೂರ್ವಭಾವಿ ಸಭೆ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ಸನ್ನಿಧಿಯಲ್ಲಿ ಜನವರಿ 22 ರಿಂದ ಫೆ.3ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಭಕ್ತರನ್ನೊಳಗೊಂಡ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ಭಾನುವಾರ ನಡೆಯಿತು.
0 5

Details

ಕಟೀಲು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜನವರಿ 26ರಂದು ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮಿತಿ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ ತಿಳಿಸಿದರು. ಮಧ್ಯಾಹ್ನ 2.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸಮೀಪ ಮೈದಾನದಲ್ಲಿ ಒಟ್ಟು ಸೇರಿ ನಂತರ ಮೆರವಣಿಗೆ ಮೂಲಕ ಶ್ರೀ ಕ್ಷೇತ್ರ ತಲುಪಲಾಗುತ್ತದೆ. ಅನ್ನಪ್ರಸಾದಕ್ಕೆ ಮಲೆಬೆನ್ನೂರು, ಟೈಗರ್ ಬ್ರಾಂಡ್ ಬೆಳ್ತಿಗೆ ಅಕ್ಕಿ, ಸಕ್ಕರೆ, ಹೆಸರುಬೇಳೆ, ಕಡ್ಲೆಬೇಳೆ, ಮೆಣಸು, ದಿನಸಿ ಸಾಮಾನು, ತೆಂಗಿನಕಾಯಿ, ಸುವರ್ಣಗೆಡ್ಡೆ, ಕುಂಬಳಕಾಯಿ, ಸಿಹಿಕುಂಬಳಕಾಯಿ, ಸೌತೆ, ಬಾಳೆ ಎಲೆ, ತುಪ್ಪ, ಕರ್ಪೂರ, ಬೆಲ್ಲ, ಅವಲಕ್ಕಿ, ಎಳ್ಳೆಣ್ಣೆ, ನಾಗಮಂಡಲಕ್ಕೆ ಅಗತ್ಯವಿರುವ ಕಂಗಿನ ಹೂ ಪಿಂಗಾರ ಇತ್ಯಾದಿ ನೀಡಬಹುದು. ಅಕ್ಕಿ ಸಂಗ್ರಹ ಕಷ್ಟವಾದರೆ ಸಮಿತಿಯಿಂದ ಅಕ್ಕಿ ವ್ಯವಸ್ಥೆ ಮಾಡಲಾಗುತ್ತಿದ್ದು, 10, 25, 50, 100 ಕೆಜಿ ಅಕ್ಕಿಗೆ ತಲಾ 400, 1000, 2000, 4000 ರೂಗಳಂತೆ ಮೊತ್ತವನ್ನು ಜ.20ರೊಳಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯ ಹೊರೆಕಾಣಿಕೆ ಕೌಂಟರಿನಲ್ಲಿ ನೀಡಿ ರಶೀದಿ ಪಡೆಯಬಹುದು ಎಂದವರು ಮಾಹಿತಿ ನೀಡಿದರು.

Education Institutions

Special Students

Reviews

Write Your Review

Rating :