☀
ಕ್ಯಾಪ್ಶನ್: ಕಟೀಲು ಬ್ರಹ್ಮ ಕಲಶೋತ್ಸವದ ಅಂಗವಾಗಿ ಶ್ರೀ ಭ್ರಾಮರೀ ಸಭಾ ಮಂಟಪದಲ್ಲಿ ಉಗ್ರಾಣ ಮಹೂರ್ತವನ್ನು ಮೈಸೂರು ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು.
☀
ಈ ಸಂದರ್ಭ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖಾರನಂದ ಸ್ವಾಮೀಜಿ, ಕಾರ್ಕಳ ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕೇಮಾರು ಸಾಂದೀಪನೀ ಸಾಧಾನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ದ.ಕ. ಸಂಸದ ನಳಿನ್ ಕುಮಾರ್ ಕಟೀಲು, ಪದ್ಮಭೂಷಣ ಡಾ. ಎಲ್ ಸುಬ್ರಹ್ಮಣ್ಯಮ್, ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಮೊಕ್ತೇಸರರು ಸನತ್‍ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ದೇವಳದ ಅನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ , ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣ ದಾಸ ಆಸ್ರಣ್ಣ, ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದ ಅನುವಂಶಿಕ ಮೊಕ್ತೇಸರ ವಾಸುದೇವ ಶಿಬರಾಯ, ಶಿಬರೂರು ಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಅತ್ತೂರು ಬೈಲು ಮಹಾಗಣಪತಿ ಮಂದಿರದ ವೆಂಕಟರಾಜ ಉಡುಪ, ಶಂಭುಮುಕ್ಕಾಲ್ದಿ ಅತ್ತೂರು ಭಂಡಾರ ಮನೆ, ವೇದವ್ಯಾಸ ಉಡುಪ ದೇವಸ್ಯ ಮಠ ಕೊಡೆತ್ತೂರು, ಜಯರಾಮ ಮುಕ್ಕಾಲ್ದಿ ಕೊಡೆತ್ತೂರು, ನಿತಿನ್ ತಿಮ್ಮ ಕಾವ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.